ಬೆಂಗಳೂರು, 24 ನವೆಂಬರ್ (ಹಿ.ಸ.):
ಆ್ಯಂಕರ್ : ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದ್ದು ಬಿಜೆಪಿ ಸೋಲು ಅನುಭವಿಸಿದೆ. ಈ ಸೋಲಿನ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದೀಗ ಯತ್ನಾಳ್ ವಿರುದ್ಧ ಕಿಡಿ ಕಾರಿದ ಬಿವೈ ವಿಜಯೇಂದ್ರ ಹಗುರವಾಗಿ ಮಾತನಾಡಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು
ಸೋಲಿನ ಹೊಣೆಯನ್ನು ರಾಜ್ಯದ ಅಧ್ಯಕ್ಷನಾಗಿ ನಾನು ಹೊರುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ತಪ್ಪನ್ನ ಸರಿಪಡಿಸಿಕೊಳ್ಳುತ್ತೆವೆ ಎಂದಿರುವ ಅವರು ಯಾರು ನಮ್ಮ ವಿರುದ್ಧ ಈ ರೀತಿ ಹಗುರವಾಗಿ ಮಾತನಾಡಿದರೆ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರದ ಸಚಿವರಾಗಿ ಕೆಲಸ ಮಾಡಿರುವಂತಹವರು ಈ ರೀತಿ ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಮುಂದೆ ಪಕ್ಷದಲ್ಲಿ ಮಾಡಬೇಕಾದಂತಹ ಕೆಲಸ ಮಾಡಲಿ, ಕಾರ್ಯಕರ್ತರನ್ನು ಸಂಘಟನೆಗೊಳಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa