ಬೆಳಗಾವಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ರಜೆಗೆ ಎಂದು ಊರಿಗೆ ಆಗಮಿಸಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಎಂಬ ಗ್ರಾಮದಲ್ಲಿ ನಡೆದಿದೆ.
ದೇವಗಾಂವ ಗ್ರಾಮದಲ್ಲಿ ಕೆ- ರೆಗೆ ಹಾರಿ ಯೋಧ ನರೇಶ್ ಅಗಸರ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 4 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 20 ದಿನಗಳ ಹಿಂದೆ ನರೇಶ್ ರಜೆಯ ಮೇಲೆ ಊರಿಗೆ ಬಂದಿದ್ದರು. ಇಂದು ಮತ್ತೆ ಕರ್ತವ್ಯಕ್ಕೆ ಯೋಧ ನರೇಶ್ ತೆರಳಬೇಕಾಗಿತ್ತು. ಆದರೆ ಕರ್ತವ್ಯಕ್ಕೆ ತೆರಳದೆ ಕೆರೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಆಗಮಿಸಿದ್ದು ಯೋಧ ನರೇಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆತ್ಮಹತ್ಯೆ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa