ಹುಬ್ಬಳ್ಳಿ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ದರೋಡೆಕೋರರ ಬಂಧನಕ್ಕೆ ತೆರಳಿದ್ದ ವೇಳೆ ಪೋಲಿಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರ ಮೇಲೆ ಪೋಲಿಸರು ಗುಂಡಿನ ದಾಳಿ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಕೆಲ ದಿನಗಳ ಹಿಂದೆ ಹುಬ್ಬಳ್ಳಿ ರೈಲು ನಿಲ್ದಾಣದ ಬಳಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ವ್ಯಕ್ತಿಯ ಕಾರು ಅಡ್ಡಗಟ್ಟಿ ದರೋಡೆ ಮಾಡಿ ಪರಾರಿಯಾಗಿದ್ದರು.
ಈ ಕುರಿತು ಹುಬ್ಬಳ್ಳಿ ಶಹರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದ ಹುಬ್ಬಳ್ಳಿ ಧಾರವಾಡ ಸಿಸಿಬಿ ಪೋಲಿಸರು ಸ್ಥಳ ಮಹಜರು ಮಾಡಲು ತೆರಳಿದ ವೇಳೆ ಆರೋಪಿಗಳು ಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಪೋಲಿಸರು ಗುಂಡಿನ ದಾಳಿ ನಡೆಸಿದ್ದಾರೆ.
ಭರತ್ ಹಾಗೂ ಫಾರೂಕ್ ಪೋಲಿಸರ ಗುಂಡಿನ ದಾಳಿಗೆ ಒಳಗಾಗಿ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa