ಇಸ್ಲಾಮಾಬಾದ, 26 ನವೆಂಬರ್ (ಹಿ.ಸ.) :
ಆ್ಯಂಕರ್ : ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಮತ್ತು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಬೆಂಬಲಿಗರು ಬೀದಿಗಿಳಿದು ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ.
ಪಾಕಿಸ್ತಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆಗೆ ಒತ್ತಾಯಿಸಿ ಅವರ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರ ರೂಪ ತಾಳಿದೆ. ಕಳೆದ ದಿನ ತಡರಾತ್ರಿ ಪ್ರತಿಭಟನಾಕಾರರು ರಾಜಧಾನಿ ಇಸ್ಲಾಮಾಬಾದ್‌ಗೆ ಪ್ರವೇಶಿಸಿದಾಗ ಹಿಂಸಾಚಾರ ಭುಗಿಲೆದ್ದಿದ್ದು ಇಂದು ಮುಂದುವರೆದಿದೆ.
ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪಿಟಿಐ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಹಾಗೂ ಇಬ್ಬರು ಪ್ರತಿಭಟನಾಕಾರರು ಸೇರಿದಂತೆ ಆರು ಜನ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಷ್ಟ್ರವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಗ್ರಹಿಸಲು ಪ್ರಧಾನಿ ಶೆಹಬಾಜ್ ಷರೀಫ್ ಅವರ ಸರ್ಕಾರ ನಿರಂತರ ಪ್ರಯತ್ನ ನಡೆಸಿದೆ. ಈ ಹಿನ್ನೆಲೆಯಲ್ಲಿ ಸೈನ್ಯ ನಿಯೋಜಿಸಲಾಗಿದ್ದು ಕಂಡಲ್ಲಿ ಗುಂಡಿಕ್ಕಿಲು ಆದೇಶಿಸಲಾಗಿದೆ. ಇದುವರೆಗೂ ಆರು ಜನ ಸಾವನಪ್ಪಿದ್ದು ೨೦೦ ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa