ಹುಬ್ಬಳ್ಳಿ : ಚಿನ್ನಾಭರಣ ಕಳ್ಳಿಯ ಬಂಧನ
ಹುಬ್ಬಳ್ಳಿ, 27 ನವೆಂಬರ್ (ಹಿ.ಸ.) : ಆ್ಯಂಕರ್ : ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಚಿನ್ನಾಭರಣ ಹಾಗೂ ಬ್ಯಾಗಗಳನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೋಲಿಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಶಿರಸಿಯಿಂದ ಧಾರವಾಡಕ್ಕೆ ಬಸ್ ನಲ್ಲಿ ಬರುತ್ತಿದ್ದ ಪ್ರಯಾಣಿಕರ ಬ್ಯಾಗ ಕಳ
Arrest


ಹುಬ್ಬಳ್ಳಿ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಚಿನ್ನಾಭರಣ ಹಾಗೂ ಬ್ಯಾಗಗಳನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೋಲಿಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಶಿರಸಿಯಿಂದ ಧಾರವಾಡಕ್ಕೆ ಬಸ್ ನಲ್ಲಿ ಬರುತ್ತಿದ್ದ ಪ್ರಯಾಣಿಕರ ಬ್ಯಾಗ ಕಳ್ಳತನವಾಗಿರುವ ಕುರಿತು ಹಳೇಹುಬ್ಬಳ್ಳಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಇನ್ಸ್ಪೆಕ್ಟರ್ ಯಳ್ಳೂರ ನೇತೃತ್ವದ ತಂಡ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಮಹಾದೇವಿ ವಡ್ಡರ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತಳಿಂದ ೨ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 7000 ಸಾವಿರ ರೂಪಾಯಿ ನಗದು, ಮೊಬೈಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿತಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande