ಓಂ ಕಾಳಿನ ಆರೋಗ್ಯವರ್ಧಕ ಗುಣಗಳು,ಉಪಯೋಗಗಳು
ಬೆಂಗಳೂರು, 28 ನವೆಂಬರ್ (ಹಿ.ಸ.) : ಆ್ಯಂಕರ್ : ಓಂ ಕಾಳನ್ನು ಅಡುಗೆಗೆ ಸಾಮಾನ್ಯವಾಗಿ ಉಪಯೋಗಿಸುತ್ತಲೇ ಇರುತ್ತೇವೆ. ಆದರೆ, ಈ ಓಂ ಕಾಳನ್ನು ಸೇವಿಸುವುದರಿಂದ ಹತ್ತು ಹಲವು ಆರೋಗ್ಯಕಾರಿ ಲಾಭಗಳಿದೆ. ನೋಡಲು ಬಹಳ ಘಮ ಘಮವೆನಿಸುವ ಬೀಜಗಳು ಇವು ಆಗಿದ್ದರೂ ಕೂಡ ಇದರ ರುಚಿ ಹಾಗೂ ವಾಸನೆ ಕೊಂಚ ಗಾಢವಾಗಿಯೇ ಇರ
ಓಂ ಕಾಳಿನ ಆರೋಗ್ಯವರ್ಧಕ ಗುಣಗಳು,ಉಪಯೋಗಗಳು


ಬೆಂಗಳೂರು, 28 ನವೆಂಬರ್ (ಹಿ.ಸ.) :

ಆ್ಯಂಕರ್ : ಓಂ ಕಾಳನ್ನು ಅಡುಗೆಗೆ ಸಾಮಾನ್ಯವಾಗಿ ಉಪಯೋಗಿಸುತ್ತಲೇ ಇರುತ್ತೇವೆ. ಆದರೆ, ಈ ಓಂ ಕಾಳನ್ನು ಸೇವಿಸುವುದರಿಂದ ಹತ್ತು ಹಲವು ಆರೋಗ್ಯಕಾರಿ ಲಾಭಗಳಿದೆ.

ನೋಡಲು ಬಹಳ ಘಮ ಘಮವೆನಿಸುವ ಬೀಜಗಳು ಇವು ಆಗಿದ್ದರೂ ಕೂಡ ಇದರ ರುಚಿ ಹಾಗೂ ವಾಸನೆ ಕೊಂಚ ಗಾಢವಾಗಿಯೇ ಇರುತ್ತದೆ.

ಹಲವಾರು ರೋಗಗಳು ಹಾಗೂ ಸೋಂಕುಗಳನ್ನು ಗುಣ ಮಾಡುವ ವಿಶಿಷ್ಟತೆಗಳನ್ನು ಇದು ಹೊಂದಿರುವುದರಿಂದ ಆಯುರ್ವೇದದಲ್ಲಿ ಬಹಳ ಪ್ರಮುಖ ಸ್ಥಾನವನ್ನು ಪಡೆದುಕೊಂಡಿವೆ. ಓಂ ಕಾಳುಗಳನ್ನು ಅಜ್ವೈನ್ ಎಂದು ಕರೆಯಲಾಗುತ್ತದೆ.

ಈ ಬೀಜಗಳ ಬಣ್ಣವು ಹಸಿರು ಅಥವಾ ಕಂದು ಬಣ್ಣದಿಂದ ಕೂಡಿರುತ್ತದೆ. ಭಾರತದ ಹಲವಾರು ಅಡುಗೆಗಳಲ್ಲಿ ಉಪ್ಪಿನಕಾಯಿ ಸಾಂಬಾರುಗಳು, ಗೊಜ್ಜುಗಳು ಹಾಗೂ ದಾಲ್ ಗಳಲ್ಲಿ ಇವುಗಳನ್ನು ಬಳಸಲಾಗುತ್ತದೆ. ನಿಮ್ಮ ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವಾರು ತೊಂದರೆಗಳನ್ನು ಗುಣಪಡಿಸುವ ಗುಣಗಳನ್ನು ಇದು ಹೊಂದಿದೆ. ಕೆಲವೊಮ್ಮೆ ಬೀಜಗಳನ್ನು ಇದರ ಗಮನಕ್ಕಾಗಿ ಹುರಿದು ನಂತರ ಅಡುಗೆಗಳಲ್ಲಿ ಬಳಸಲಾಗುತ್ತದೆ.

ಭಾರತವನ್ನು ಹೊರತುಪಡಿಸಿ ಈ ಬೀಜಗಳನ್ನು ಇರಾನ್, ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನಗಳಲ್ಲಿ ಬೆಳೆಯಲಾಗುತ್ತದೆ. ಸಾಕಷ್ಟು ಮಂದಿ ಹೊಟ್ಟೆ, ಕರುಳು ಹಾಗೂ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಅಂಗಾಂಗಗಳಲ್ಲಿ ಹುಣ್ಣುಗಳಿಂದ ಬಳಲುತ್ತಿರುತ್ತಾರೆ, ಈ ಹುಣ್ಣುಗಳಿಂದ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿರುತ್ತಾರೆ, ಇದಕ್ಕಾಗಿ ಹಲವು ಔಷಧಗಳ ಮೊರೆ ಹೋಗಿರುತ್ತಾರೆ. ಆದರೆ, ಓಂ ಕಾಳುಗಳು ಇಂತಹ ಹುಣ್ಣುಗಳನ್ನು ವಾಸಿಮಾಡಲು ಪರಿಣಾಮಕಾರಿಯಾಗಿದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಓಂ ಕಾಳುಗಳು ಅಸಿಡಿಟಿ, ಗ್ಯಾಸ್ ಸಮಸ್ಯೆ, ಜೀರ್ಣಕ್ರಿಯೆಯ ವಿಳಂಬವಾಗುವ ತೊಂದರೆಗಳನ್ನು ಸರಿಪಡಿಸುತ್ತದೆ. ಜೀರ್ಣಕ್ರಿಯೆಯ ತೊಂದರೆಗಳನ್ನು ಸರಿಮಾಡಿಕೊಳ್ಳಲು ಅರ್ಧ ಚಮಚದಷ್ಟು ಓಂಕಾಳು ಗಳನ್ನು ಜಗಿದು ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ಕುಡಿಯಬಹುದು.

ಕಾಳುಗಳು ತೈವನ್ ಎಂಬ ಅಂಶವನ್ನು ಒಳಗೊಂಡಿದೆ. ಈ ಅಂಶವು ಕೀಟಾಣುಗಳ ಹಾಗೂ ಶಿಲಿಂಧ್ರಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದೆ. ಹಲವಾರು ಚರ್ಮ ಸಮಸ್ಯೆಗಳು ಶಿಲಿಂಧ್ರದ ಮುಖಾಂತರ ನಿಮಗೆ ಬರಬಹುದು. ಇಂತಹ ಸಮಸ್ಯೆಗಳಿಗೆ ಕೇವಲ ನಿಮಿಷಗಳಲ್ಲಿ ಓಂಕಾಳು ಗಳನ್ನು ಬಳಸಿ ಪರಿಹಾರ ಕಂಡುಕೊಳ್ಳಬಹುದು.

ಕೆಲವು ಓಂ ಕಾಳುಗಳನ್ನು ತೆಗೆದುಕೊಂಡು ಕುಟ್ಟಿ ಪುಡಿ ಮಾಡಿ ಅವುಗಳನ್ನು ನಿಮ್ಮ ಚರ್ಮ ಸಮಸ್ಯೆ ಇರುವ ಜಾಗಕ್ಕೆ ನೇರವಾಗಿ ಹಚ್ಚಬಹುದು. ನಿಮ್ಮ ಮೊಡವೆ ಅಥವಾ ಕಲೆಗಳು ತಮ್ಮ ಬಣ್ಣವನ್ನು ಕಳೆದುಕೊಳ್ಳಬೇಕು ಎಂದಿದ್ದರೆ ಓಂ ಕಾಳುಗಳ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ನಂತೆ ತಯಾರಿಸಿ. ಇದನ್ನು ಮೊಡವೆಗಳು ಇರುವ ಜಾಗಕ್ಕೆ ಹಚ್ಚಿ 15 ನಿಮಿಷದ ವರೆಗೆ ಹಾಗೆ ಬಿಟ್ಟು ನಂತರ ತೊಳೆದುಕೊಳ್ಳಿ.

ಹೊಟ್ಟೆಯ ತಳಮಳ ಅಥವಾ ಹೊಟ್ಟೆಯ ನೋವುಗಳು ನಮ್ಮ ಆಹಾರ ಸರಿಯಾಗಿ ಜೀರ್ಣವಾಗದೇ ಇದ್ದಾಗ ಸಂಭವಿಸಬಹುದು. ಇಂತಹ ಸಮಯದಲ್ಲಿ ನಿಮಗೆ ಓಂ ಕಾಳುಗಳು ಸಹಾಯ ಮಾಡುತ್ತದೆ. ಜೀರ್ಣವಾಗದ ಆಹಾರವು ಮಲವಿಸರ್ಜನೆಯ ಮೂಲಕ ದೇಹದಿಂದ ಹೊರ ಹೋಗದಿದ್ದಾಗ ಕೂಡ ಹೊಟ್ಟೆಯ ಸಮಸ್ಯೆಗಳು ಬರಬಹುದು.

ಓಂ ಕಾಳುಗಳನ್ನು ಜಗಿದು ತಿನ್ನುವುದರ ಮುಖಾಂತರ ಈ ತೊಂದರೆಯಿಂದ ನೀವು ಹೊರಬರಬಹುದು. ಓಂ ಕಾಳುಗಳನ್ನು ಕುಟ್ಟಿ ಪುಡಿಮಾಡಿ ನೀರಿನೊಂದಿಗೆ ಬೆರೆಸಿ ಸೇವಿಸುವುದರಿಂದ ಗರ್ಭಿಣಿ ಮಹಿಳೆಯರಿಗೆ ಉಂಟಾಗುವ ಸಮಸ್ಯೆಗಳು ಹಾಗೂ ಸಾಮಾನ್ಯ ಮಹಿಳೆಯರಲ್ಲಿ ಉಂಟಾಗುವ ಋತುಚಕ್ರದ ಏರುಪೇರುಗಳನ್ನು ಸರಿ ಮಾಡಿಕೊಳ್ಳಬಹುದು. ಓಂ ಕಾಳುಗಳನ್ನು ಸ್ವಲ್ಪ ಹುರಿದು ನಂತರ ನೀರಿಗೆ ಹಾಕಿ ಕುದಿಸಿ ಆ ನೀರನ್ನು ಸೋಸಿ ಕುಡಿಯಬಹುದು

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande