ನವದೆಹಲಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಅರಬ್ಬಿ ಸಮುದ್ರದಲ್ಲಿ ಶ್ರೀಲಂಕಾದ ಎರಡು ಮೀನುಗಾರಿಕಾ ದೋಣಿಗಳಿಂದ 500 ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡು ಒಂಬತ್ತು ಜನರನ್ನು ಬಂಧಿಸಲಾಗಿದೆ.
ಮಾದಕ ವಸ್ತುಗಳ ಸಾಗಾಟ ಕುರಿತು ಮಾಹಿತಿ ಮೇರೆಗೆ ಭಾರತ ಮತ್ತು ಶ್ರೀಲಂಕಾ ನೌಕಾಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಎರಡೂ ದೋಣಿಗಳು ಮತ್ತು ಸಿಬ್ಬಂದಿಯನ್ನು ವಶಪಡಿಸಿಕೊಂಡಿದ್ದಾರೆ.
ಎರಡೂ ದೋಣಿಗಳನ್ನು, ಸಿಬ್ಬಂದಿ ಮತ್ತು ವಶಪಡಿಸಿಕೊಂಡ ಮಾದಕ ದ್ರವ್ಯಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಶ್ರೀಲಂಕಾದ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa