ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಹೆಸ್ಕಾಂ ನೂತನ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು.
ಇಂದು ಹುಬ್ಬಳ್ಳಿ ಹೆಸ್ಕಾಂ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ ದೇಶದಲ್ಲಿ ಗೃಹ ಜ್ಯೋತಿ ಯೋಜನೆ ಮಾದರಿಯಾಗಿದೆ. ಇಲಾಖೆ ಅಧಿಕಾರಿಗಳ ಸಹಕಾರ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ. ಹೆಸ್ಕಾಂ ವ್ಯಾಪ್ತಿಯ ಪ್ರದೇಶಗಳಿಗೆ ಸಂಚರಿಸಿ, ಸಮಸ್ಯೆಗಳನ್ನು ಪರಿಹರಿಸಲಾಗುವುದು. ನಮ್ಮ ಸರ್ಕಾರ ಬಡವರು, ರೈತರು ಮತ್ತು ಕೂಲಿ ಕಾರ್ಮಿಕರ ಪರವಾಗಿದೆ. ಹೆಸ್ಕಾಂ ಸಂಸ್ಥೆ ಒಳ್ಳೆಯ ಕೆಲಸ ಮಾಡುವ ಸಂಸ್ಥೆಯಾಗಿರುತ್ತದೆ. ನನಗೆ ನೀಡಿರುವ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುತ್ತೇನೆ ಎಂದು ಖಾದ್ರಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa