ರಾಯಚೂರು, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಪಂಗಡದ ಯುವಕ ಅಥವಾ ಯುವತಿಯರಿಗೆ ಡ್ರೋನ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಕನಿಷ್ಟ 18 ವರ್ಷ, ಪುರುಷರಿಗೆ ಗರಿಷ್ಟ 35 ವರ್ಷ ಹಾಗೂ ಮಹಿಳೆಯರಿಗೆ ಗರಿಷ್ಟ 40 ವರ್ಷಗಳು ಮೀರತಕ್ಕದ್ದಲ್ಲ. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಬಾರದು. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮೂಲನಿವಾಸಿಯಾಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
ಮೂಲನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ & ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ.
ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ. ಈ ಎಲ್ಲ ಷರತ್ತುಗೊಳ್ಳಪಟ್ಟ ಆಸಕ್ತ ಪರಿಶಿಷ್ಟ ವರ್ಗದ ಯುವಕ ಅಥವಾ ಯುವತಿಯರು ಜಿಲ್ಲಾ ಅಥವಾ ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಇದೇ 2024ರ ಡಿ.12ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್