ಬಿಜೆಪಿ ಈಗ ಒಡೆದ ಮನೆ : ಸಚಿವ ಸತೀಶ್ ಜಾರಕಿಹೊಳಿ
ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಮುಖ್ಯಮಂತ್ರಿ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ ಹಕ್ಕು ನಮಗೆ ಇಲ್ಲ. ಅದೆಲ್ಲದಕ್ಕೂ ಮ
Satish


ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಮುಖ್ಯಮಂತ್ರಿ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ ಹಕ್ಕು ನಮಗೆ ಇಲ್ಲ. ಅದೆಲ್ಲದಕ್ಕೂ ಮುದ್ರೆ ಒತ್ತಲು ಹೈ ಕಮಾಂಡ್ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಹಾಸನದಲ್ಲಿ ಮಾತ್ರವಲ್ಲದೆ ರಾಜ್ಯದ ವಿವಿಧ ಮೂಲೆಗಳಲ್ಲಿಯೂ ಅಹಿಂದ್ ಸಮಾವೇಶ ಮಾಡಲಾಗುತ್ತದೆ. ಇದು ಯಾವುದೇ ಒಬ್ಬ ವ್ಯಕ್ತಿಗತವಾದಂತ ಸಮಾವೇಶ ಅಲ್ಲ. ಕಾಂಗ್ರೆಸ್ ಚಿಹ್ನೆ ಅಡಿಯಲ್ಲಿ ಕಾಂಗ್ರೆಸ್ ಪಕ್ಷವೇ ಮಾಡುವ ಸಮಾವೇಶ ಎಂದರು.

ಮುಖ್ಯಮಂತ್ರಿ ಅವಧಿಯ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಈ ಐದು ವರ್ಷವೋ ಮುಂದಿನ ಐದು ವರ್ಷವೂ ಗೊತ್ತಿಲ್ಲ. ಆದರೆ ಮುಖ್ಯಮಂತ್ರಿ ಬದಲಾವಣೆಗೆ ಖುರ್ಚಿ ಖಾಲಿ ಇಲ್ಲ. ಅಲ್ಲದೆ ಜೆಡಿಎಸ್, ಬಿಜೆಪಿ ಪಕ್ಷಗಳ ಅವಧಿಯಲ್ಲೂ ಮುಖ್ಯಮಂತ್ರಿಗಳ ಬದಲಾವಣೆ ಆಗಿವೆ. ಆದರೆ ನಮ್ಮ ಪಕ್ಷದ ನಿರ್ಧಾರದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande