ನವದೆಹಲಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಅಮೆರಿಕ ಅಧ್ಯಕ್ಷ ಜೋ ಬಿಡನ್ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ದುರದೃಷ್ಟಕರ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಇಂತಹ ಹೇಳಿಕೆಗಳು ಉಭಯ ದೇಶಗಳ ನಡುವಿನ ಸೌಹಾರ್ದ ಮತ್ತು ಮಹತ್ವದ ಸಂಬಂಧಗಳಿಗೆ ಧಕ್ಕೆಯಾಗಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಎರಡೂ ದೇಶಗಳ ನಡುವಿನ ಈ ಸಂಬಂಧವು ಸ್ಥಿರತೆ, ಒಗ್ಗಟ್ಟು ಮತ್ತು ಪರಸ್ಪರ ಗೌರವಗಳಿಂದ ಕೂಡಿದೆ ಈ ರೀತಿಯ ಹೇಳಿಕೆಗಳು ಎರಡು ದೇಶಗಳ ಸಂಬಂಧಕ್ಕೆ ಧಕ್ಕೆ ತರಲಿದೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa