ಸಿದ್ಧಾರೂಡ ಸ್ವಾಮಿ ಮಠದ ಲಕ್ಷ ದೀಪೋತ್ಸವ ವಿಶೇಷ ಬಸ್ ವ್ಯವಸ್ಥೆ
ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಡಿಸೆಂಬರ್ ೧ ರವಿವಾರದಂದು ಜರುಗಲಿರುವ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ಭಕ್ತಾದಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಜಿಲ್ಲೆಯೊಳಗೆ ಪ್ರಮುಖ ಸ್ಥಳಗಳಿಗೆ ಹಾಗೂ ಹೊರ ಜಿಲ್ಲೆಗಳಿ
Special bus


ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಡಿಸೆಂಬರ್ ೧ ರವಿವಾರದಂದು ಜರುಗಲಿರುವ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ಭಕ್ತಾದಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಜಿಲ್ಲೆಯೊಳಗೆ ಪ್ರಮುಖ ಸ್ಥಳಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಡಿಸೆಂಬರ್ 1ರಂದು ರವಿವಾರ ಸಂಜೆ 6 ಗಂಟೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪ್ರಮುಖ ಸ್ಥಳಗಳು, ನೆರೆಯ ಜಿಲ್ಲೆಗಳು ಮತ್ತು ದೂರದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆಯಿಂದಲೂ ಸಹ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ.

ಭಕ್ತಾದಿಗಳು ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸ್ಥಳಗಳಿಗೆ ಹಿಂದಿರುಗಲು ಅನುಕೂಲವಾಗುವಂತೆ ಹುಬ್ಬಳ್ಳಿಯಿಂದ ಜಿಲ್ಲೆಯೊಳಗೆ ಪ್ರಮುಖ ಸ್ಥಳಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಬಸ್ಸುಗಳು ಹೊಸೂರು ಬಸ್ ನಿಲ್ದಾಣ ಹಾಗೂ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande