ನವದೆಹಲಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಣ್ಣಿನ ಮಗ ಎಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯ ಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಮಾತನಾಡದಿರುವುದು ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa