ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಹಲವು ವರ್ಷಗಳಿಂದ ಹಕ್ಕು ಪತ್ರ ಪಡೆಯುವಲ್ಲಿ ವಿಫಲವಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಬೆಂಗೇರಿ ಗ್ರಾಮದ ಖಾದಿ ಗ್ರಾಮೋದ್ಯೋಗ ಹತ್ತಿರ ಇರುವ ಕೆರಿವಂಡಿ ಕೊಳೆಗೇರಿ ಪ್ರದೇಶದ ಜನರ ಸಮಸ್ಯೆಗೆ ಪರಿಹಾರ ನೀಡುವಂತೆ ಇಂದು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಕಾಂಗ್ರೆಸ್ ಯುವ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಮನವಿ ಸಲ್ಲಿಸಿದ್ದಾರೆ.
ಹುಬ್ಬಳ್ಳಿಗೆ ಇಂದು ಸಚಿವರು ಆಗಮಿಸಿದ ವೇಳೆ ಭೇಟಿ ಮಾಡಿದ ಅವರು ಹಲವು ವರ್ಷಗಳಿಂದ ನಡೆದಿರುವ ತೊಂದರೆ ಬಗ್ಗೆ ಸಚಿವರಿಗೆ ವಿವರಣೆ ನೀಡಿ.218 ನಿವಾಸಿಗಳಿಗೆ ವಸತಿ ಹಕ್ಕುಪತ್ರ ವಿತರಿಸುವಂತೆ ಮನವಿ ಮಾಡಿದರು.ಮನವಿಗೆ ಸ್ಪಂದಿಸಿರುವ ಸಚಿವರು ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ರಜತ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa