ಶಕ್ತಿ ಕಳೆದುಕೊಳ್ಳುವ ಭೀತಿಯಲ್ಲಿ ಕಾಂಗ್ರೆಸ್
ಹುಬ್ಬಳ್ಳಿ, 4 ನವೆಂಬರ್ (ಹಿ.ಸ.): ಆ್ಯಂಕರ್:ರಾಜ್ಯದ ಮೂರು ಉಪಚುನಾವಣೆ ಮತದಾನಕ್ಕೆ ಕೆಲವೇ ದಿನಗಳ ಬಾಕಿ ಇರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಪರಿಷ್ಕರಣೆ ಹೇಳಿಕೆಯಿಂದ ಮಹಿಳೆಯರ ಮತ ಕೈ ತಪ್ಪುವ ಭೀತಿ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ. ಪಂಚ ಗ್ಯಾರಂಟಿ
Guarantee


ಹುಬ್ಬಳ್ಳಿ, 4 ನವೆಂಬರ್ (ಹಿ.ಸ.):

ಆ್ಯಂಕರ್:ರಾಜ್ಯದ ಮೂರು ಉಪಚುನಾವಣೆ ಮತದಾನಕ್ಕೆ ಕೆಲವೇ ದಿನಗಳ ಬಾಕಿ ಇರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಪರಿಷ್ಕರಣೆ ಹೇಳಿಕೆಯಿಂದ ಮಹಿಳೆಯರ ಮತ ಕೈ ತಪ್ಪುವ ಭೀತಿ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಯಾವುದೇ ಗೊಂದಲವಿಲ್ಲದೆ ಸರಾಗವಾಗಿ ನಡೆಯುತ್ತಿದೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ನೀಡಿರುವ ಹೇಳಿಕೆ ಮಹಿಳೆಯರಲ್ಲಿ ಅಸಮಾಧಾನ ಮೂಡಿಸಿದೆ. ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ನಿರ್ಣಾಯಕರಾಗಿದ್ದು ಈ ಸಂದರ್ಭದಲ್ಲಿ ಪರಿಷ್ಕರಣೆ ಹೇಳಿಕೆಯಿಂದ ಮಹಿಳಾ ಮತ ಕೈ ತಪ್ಪುವ ಭೀತಿ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ.

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಯಲ್ಲಿ ಗ್ಯಾರಂಟಿ ಬಿಟ್ಟು ಬೇರೆ ಅಸ್ತ್ರವೇ ಇಲ್ಲದಂತಾಗಿತ್ತು. ಇದೀಗ ಕಾಂಗ್ರೆಸ್ ಅದೇ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಸರಕಾರದ ವಿರುದ್ದ ಮುಗಿಬಿದ್ದಿವೆ.

ಎರಡು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಮೇಲೂ ಗ್ಯಾರಂಟಿ ಮರುಪರಿಶೀಲನೆ ಹೇಳಿಕೆ ನೇರ ಪರಿಣಾಮ ಬೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande