ರಾಯಚೂರು, 05 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ಯಾನ್ ಇಂಡಿಯಾ ರೆಸ್ಕ್ಯೂ & ರಿಹಾಬಿಲಿಟೇಷನ್ ಕ್ಯಾಂಪೆನ್ ಅಂಗವಾಗಿ ಇದೇ ನ.04ರಂದು ಸಮಿತಿಯ ಅಧಿಕಾರಿಗಳಿಂದ ಜಿಲ್ಲೆಯ ದೇವದುರ್ಗ ನಗರದ ವಿವಿಧ ವಿವಿಧ ಹೋಟೆಲ್, ಬೇಕರಿ, ಕಿರಾಣಿ ಅಂಗಡಿ ಗ್ಯಾರೇಜ್ ಸೇರಿದಂತೆ ಇನ್ನಿತರೆ ಕಡೆ ತಪಾಸಣೆ ಮಾಡಿ, ಒಬ್ಬ ಕಿಶೋರ ಬಾಲಕಾರ್ಮಿಕನ್ನು ರಕ್ಷಣೆ ಮಾಡಿದ್ದು, ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವದುರ್ಗದ ಮೆ. ಸಮರ್ಥ ಆಟೋ ಗ್ಯಾರೇಜ್, ಇಂಡಿಯನ್ ಪೆಟ್ರೋಲ್ ಬಂಕ್ ಎದುರುಗಡೆ, ಜಾಲಹಳ್ಳಿ ರಸ್ತೆ, ಕೆಲಸ ಮಾಡುತ್ತಿದ್ದ ಒಬ್ಬ ಬಾಲಕಾರ್ಮಿಕನನ್ನು ರಕ್ಷಣೆ ಮಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆ.ಇ.ಬಿ ಕಾಲೋನಿ ದೇವದುರ್ಗದಲ್ಲಿ 6ನೇ ತರಗತಿಗೆ ದಾಖಲು ಮಾಡಿ, ಮಗುವನ್ನು ಪೋಷಕರಿಗೆ ಒಪ್ಪಿಸಲಾಯಿತು. ಮಗುವನ್ನು ಕೆಲಸಕ್ಕೆ ನೇಮಕಮಾಡಿಕೊಂಡಿದ್ದ ಗ್ಯಾರೇಜ್ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಈ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಅವರು ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯೆ 2016ರಂತೆ 14ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಹಾಗೂ 15ರಿಂದ 18ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ 50,000/-ರೂ.ಗಳ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ ಇರುತ್ತದೆ ಎಂದರು.
ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡಬಹುದಾಗಿದೆಂದರು.
ಮಾನವಿ ವೃತ್ತದ ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ಶಿಕ್ಷಣ ಇಲಾಖೆ ಇ.ಸಿ.ಒ ರಾಜನಗೌಡ, ಗ್ರಾಮ ಆಡಳಿತಾಧಿಕಾರಿ ವಿರೇಶ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಿಕ್ಕಯ್ಯ, ಡಾನ್ಬಾಸ್ಕೋ ಸಂಸ್ಥೆಯ ನಾಗರಾಜ ಮತ್ತು ಬಸವರಾಜ ಅವರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್