ಬಿಹಾರದ ರಾಜ್‌ಗಿರ್‌ನಲ್ಲಿ ಮಹಿಳಾ ಏಷ್ಯನ್ ಹಾಕಿ ಚಾಂಪಿಯನ್‌ಶಿಪ್
ಇದೇ ೧೧ ರಿಂದ ಬಿಹಾರದ ರಾಜ್‌ಗಿರ್‌ನಲ್ಲಿ ಮಹಿಳಾ ಏಷ್ಯನ್ ಹಾಕಿ ಚಾಂಪಿಯನ್‌ಶಿಪ್
ನನಾ


ಪಟ್ನಾ, 05 ನವೆಂಬರ್ (ಹಿ.ಸ.) :

ಆ್ಯಂಕರ್ : ಬಿಹಾರದ ರಾಜ್‌ಗಿರ್‌ನಲ್ಲಿ ಇದೇ ತಿಂಗಳ ೧೧ ರಿಂದ ೨೦ ರವರೆಗೆ ನಡೆಯಲಿರುವ ಮಹಿಳಾ ಏಷ್ಯನ್ ಹಾಕಿ ಚಾಂಪಿಯನ್‌ಶಿಪ್ ಟ್ರೋಫಿಯಲ್ಲಿ ಭಾಗವಹಿಸಲು ಭಾರತೀಯ ಮಹಿಳಾ ಹಾಕಿ ತಂಡ ಗಯಾ ತಲುಪಿದೆ.

ನಾಯಕಿ ಸಲೀಮಾ ಟೆಟೆ ನೇತೃತ್ವದ 18 ಸದಸ್ಯರ ಭಾರತೀಯ ತಂಡಕ್ಕೆ ಸಾಂಪ್ರದಾಯಿಕ ರೀತಿಯಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು.

ಬಿಹಾರದಲ್ಲಿ ಹೊಸದಾಗಿ ನಿರ್ಮಿಸಲಾದ ಅತ್ಯಾಧುನಿಕ ಕ್ರೀಡಾ ಸಂಕೀರ್ಣದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿರುವ ಕ್ರೀಡಾಕೂಟದಲ್ಲಿ ಚೀನಾ, ಮಲೇಷ್ಯಾ, ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ ದೇಶಗಳು ಸಹ ಭಾಗವಹಿಸಲಿವೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನವೆಂಬರ್ ೧೧ ರಂದು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande