ಶಿವಮೊಗ್ಗ, 05 ನವೆಂಬರ್ (ಹಿ.ಸ.) :
ಆ್ಯಂಕರ್ : ಚಿರತೆ ಉಗುರು ಹಾಗೂ ಹಲ್ಲುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಸಾಗರದ ಅರಣ್ಯ ಸಂಚಾರಿ ದಳ ಬಂಧಿಸಿದೆ. ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಬಂಧಿತ ಆರೋಪಿ. ಆತನಿಂದ ಚಿರತೆಯ 16 ಉಗುರು, 3 ಹಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಾಗರ ಅರಣ್ಯ ಸಂಚಾರ ಪೊಲೀಸ್ ದಳದ ಸಬ್ ಇನ್ ಸ್ಪೆಕ್ಟರ್ ವಿನಾಯಕ ಕೆ.
ತಿಳಿಸಿದ್ದಾರೆ.
ಅನುಮಾನದ ಹಿನ್ನೆಲೆಯಲ್ಲಿ ಲೋಕೇಶ್ ನನ್ನು ವಿಚಾರಣೆಗೊಳಪಡಿಸಿದಾಗ ಈ ಅಕ್ರಮ ಸಾಗಾಟ ಪತ್ತೆಯಾಗಿದೆ. ತಕ್ಷಣ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ವಿನಾಯಕ ಕೆ.
ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್