ಫ್ಲೋರಿಡಾ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಗೆಲುವಿನ ಹಿನ್ನೆಲೆಯಲ್ಲಿ ಟ್ರಂಪ್ ಮೊದಲ ಭಾಷಣ ಮಾಡಿದ್ದಾರೆ.
ಫ್ಲೋರಿಡಾದ ಪಾಮ್ ಬೀಚ್ನಲ್ಲಿ ನಡೆದ ಚುನಾವಣಾ ವೀಕ್ಷಣಾ ಕಾರ್ಯಕ್ರಮದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಹಿಂದೆಂದೂ ಕಂಡಿರದ ರಾಜಕೀಯ ಗೆಲುವು. ನಾನು ಅಮೆರಿಕಾದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಹಿಂದೆಂದೂ ಯಾರೂ ನೋಡದ ಚಳುವಳಿಯಾಗಿದೆ.̤ ನಾವು ನಮ್ಮ ಗಡಿಗಳನ್ನು ಸರಿಪಡಿಸಲು ಹೊರಟಿದ್ದೇವೆ, ನಮ್ಮ ದೇಶದ ಎಲ್ಲಾ ಸಮಸ್ಯೆಯನ್ನು ಸರಿಪಡಿಸುತ್ತೇವೆ. ನಾವು ಇತಿಹಾಸವನ್ನು ನಿರ್ಮಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾಷಣದಲ್ಲಿ ಉದ್ಯಮಿ ಎಲಾನ್ ಮಸ್ಕ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ತಮ್ಮ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ. ಎಲಾನ್ ಮಸ್ಕ್ ಅವರು ಚುನಾವಣೆಯಲ್ಲಿ ಟ್ರಂಪ್ ಅವರನ್ನು ಉತ್ಸಾಹದಿಂದ ಬೆಂಬಲಿಸಿದ್ದಾರೆ ಮತ್ತು ಹಣವನ್ನು ಸಹ ಒದಗಿಸಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್