ಹುಬ್ಬಳ್ಳಿ, 7 ನವೆಂಬರ್ (ಹಿ.ಸ.) :
ಆ್ಯಂಕರ್ : ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿ ಬಂದಿದೆ. ಕರ್ನಾಟಕ ಜನರ ಸಮಸ್ಯೆಗಳ ಆಲಿಸಲು ಬಂದಿದ್ದೇನೆ. ಇದರ ವಿಸ್ತೃತ ವರದಿ ಸಿದ್ಧಪಡಿಸಿ ಕೇಂದ್ರ ಸರಕಾರಕ್ಕೆ ನೀಡಲಾಗುವುದು ಎಂದು ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ರೈತರು, ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸುಮಾರು 50 ರಿಂದ 60 ವರ್ಷಗಳಿಂದ ಉಳಿಮೆ ಮಾಡಿದ ಜಮೀನು, ದೇವಸ್ಥಾನಗಳನ್ನು ಕಬಳಿಸಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ. ಸದ್ಯ ಹುಬ್ಬಳ್ಳಿಯಲ್ಲಿ ಅದ್ವೈತ್ ಪರಿಷತ ಉತ್ತರ ಕರ್ನಾಟಕ ಹಾಗೂ ರತ್ನ ಭಾರತ ರೈತ ಸಮಾಜದವರು ಮನವಿ ಸಲ್ಲಿಸಿದ್ದಾರೆ. ಇದನ್ನು ಸಹ ಪರಿಗಣಿಸಲಾಗುವುದು ಎಂದರು.
ಇದೇ ವೇಳೆ ಹುಬ್ಬಳ್ಳಿ ಖಾಸಗಿ ಹೊಟೆಲ್ ನಲ್ಲಿ ವಕ್ಫ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ರೈತ ಸಂಘಟನೆ ಹಾಗೂ ಹಿಂದು ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಅಹವಾಲು ಸ್ವೀಕಾರಿಸಿದ ಪಾಲ್ ಅವರು ಪ್ರಾಮಾಣಿಕವಾಗಿ ನ್ಯಾಯ ದೊರಕಿಸುವ ಪ್ರಯತ್ನ ಮಾಡಲಾಗುವದು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa