ಹುಬ್ಬಳ್ಳಿ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರಕಾರ ರಾಷ್ಟ್ರೀಯ ವಕ್ಪ್ ಬೋರ್ಡ್ ತಿದ್ದುಪಡಿ ತರಲು ಚಿಂತನೆ ನಡೆಸಿದೆ. ಹೀಗಾಗಿ ಸಂಸದೀಯ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರು ರಾಜ್ಯಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುತ್ತಿದ್ದಾರೆ. ರಾಜ್ಯದಲ್ಲಿ ವಕ್ಪ್ ಬೋರ್ಡ್ ಆಟಾಟೋಪಗಳನ್ನು ಅಧ್ಯಯನ ಮಾಡುವ ಸಲುವಾಗಿ ಸಮಿತಿ ರಾಜ್ಯಕ್ಕೆ ಬಂದಿದೆ ಎಂದು ಹುಬ್ಬಳ್ಳಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ 1,000 ಜನ ರೈತರು ದೂರು ಕೊಟ್ಟಿದ್ದಾರೆ. 70ಕ್ಕೂ ಅಧಿಕ ಮುಖಂಡರು ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ವಿಜಯಪುರ, ಬೆಳಗಾವಿಗೆ ತೆರಳಿ ಅಲ್ಲಿ ಸಹ ರೈತರ ಮನವಿ ಸ್ವೀಕಾರ ಮಾಡಲಿದ್ದು ಬಳಿಕ ವರದಿ ತಯಾರಿಸಿ ಕೇಂದ್ರ ಸರಕಾರಕ್ಕೆ ನೀಡಲಿದೆ ಎಂದು ತಿಳಿಸಿದರು.
ಇನ್ನೂ ಸಚಿವ ಜಮೀರ್ ಅಹ್ಮದ್ ಅಧಿಕಾರ, ಕಾನೂನು ಬಗ್ಗೆ ಮಾತನಾಡುವುದು ಬಿಡಬೇಕು. ಅವರು ಮಾಡಿದ ಕೆಲಸದಿಂದಲೇ ರಾಜ್ಯದ ರೈತರಿಗೆ ಈ ಪರಿಸ್ಥಿತಿ ಬಂದಿದೆ. ಜಮೀರ್ ಕಾನೂನು ಬಗ್ಗೆ ಮಾತನಾಡೋದು ಭೂತದ ಬಾಯಿಯಲ್ಲಿ ಭಗವದ್ಗೀತೆ ಹೇಳಿದಂತೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa