ಬೆಳಗಾವಿ : ವಿಆರ್‌ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ
ಬೆಳಗಾವಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ವ್ಯಾಪ್ತಿಯ ನಾಗರಗಾಳಿ-01, ಹಿರೇಹಟ್ಟಿಹೊಳಿ- 01 ಹಾಗೂ ಪಾರವಾಡ-01 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಮನರ್ವಸತಿ ಕಾರ್ಯಕರ್ತರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲ
ಬೆಳಗಾವಿ : ವಿಆರ್‌ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ


ಬೆಳಗಾವಿ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ವ್ಯಾಪ್ತಿಯ ನಾಗರಗಾಳಿ-01, ಹಿರೇಹಟ್ಟಿಹೊಳಿ- 01 ಹಾಗೂ ಪಾರವಾಡ-01 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಮನರ್ವಸತಿ ಕಾರ್ಯಕರ್ತರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ 9.000 ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿದಾರರು ವಿಕಲಚೇತನರಿದ್ದು, ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೊಳಪಟ್ಟಿರಬೇಕು.

ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಿಕಲಚೇತನ ಮಹಿಳಾ, ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಕನಿಷ್ಠ 18 ವರ್ಷ ಗರಿಷ್ಟ 45 ವರ್ಷ ವಯೋಮಿತಿಯಲ್ಲಿರಬೇಕು.

ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ ೭ರ ಒಳಗಾಗಿ ಖಾನಾಪೂರ ತಾಲೂಕು ಪಂಚಾಯತ ಕಾರ್ಯಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಖಾನಾಪೂರ ತಾಲೂಕಿನ ಎಂಆರ್‌ಡಬ್ಲ್ಯೂ ಅಧಿಕಾರಿಯ ದೂರವಾಣಿ:9908216302 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande