ಭಯೋತ್ಪಾದನೆ ಮುಕ್ತ ಭಾರತ ನಿರ್ಮಾಣಕ್ಕೆ ಬದ್ಧ : ಅಮಿತ್​ ಶಾ
ನವದೆಹಲಿ, 07 ನವೆಂಬರ್(ಹಿ.ಸ.) : ಆ್ಯಂಕರ್ : ಭಯೋತ್ಪಾದನೆಯ ನಿಗ್ರಹಕ್ಕೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಮತ್ತು ಕಾರ್ಯತಂತ್ರವನ್ನು ಬಿಡುಗಡೆ ಮಾಡಲಿದೆ. ಅದು ಇಡೀ ಭಯೋತ್ಪಾದನಾ ವ್ಯವಸ್ಥೆಯನ್ನು ನಾಶಮಾಡಲು ಸಹಾಯ ಮಾಡುತ್ತದೆ. ಶೂನ್ಯ ಸಹಿಷ್ಣುತೆಯ ನೀತಿಯೊಂದಿಗೆ ಭ
ಭಯೋತ್ಪಾದನೆ ಮುಕ್ತ ಭಾರತ ನಿರ್ಮಾಣಕ್ಕೆ ಬದ್ಧ: ಅಮಿತ್​ ಶಾ


ನವದೆಹಲಿ, 07 ನವೆಂಬರ್(ಹಿ.ಸ.) :

ಆ್ಯಂಕರ್ : ಭಯೋತ್ಪಾದನೆಯ ನಿಗ್ರಹಕ್ಕೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಮತ್ತು ಕಾರ್ಯತಂತ್ರವನ್ನು ಬಿಡುಗಡೆ ಮಾಡಲಿದೆ. ಅದು ಇಡೀ ಭಯೋತ್ಪಾದನಾ ವ್ಯವಸ್ಥೆಯನ್ನು ನಾಶಮಾಡಲು ಸಹಾಯ ಮಾಡುತ್ತದೆ. ಶೂನ್ಯ ಸಹಿಷ್ಣುತೆಯ ನೀತಿಯೊಂದಿಗೆ ಭಯೋತ್ಪಾದನೆ ಮುಕ್ತ ಭಾರತ ನಿರ್ಮಿಸಲು ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿಯಲ್ಲಿಂದು ‘ಭಯೋತ್ಪಾದನಾ ವಿರೋಧಿ ಸಮಾವೇಶ-2024’ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅಮಿತ್ ಶಾ, ಭಯೋತ್ಪಾದಕ ದಾಳಿಗಳು ಮತ್ತು ಅವರ ಪಿತೂರಿಗಳನ್ನು ಎದುರಿಸಬೇಕಾದರೆ, ನಮ್ಮ ಯುವ ಅಧಿಕಾರಿಗಳು ಅತ್ಯುನ್ನತ ತಂತ್ರಜ್ಞಾನದೊಂದಿಗೆ ಸಜ್ಜುಗೊಳಿಸಲು, ಮುಂದಿನ ದಿನಗಳಲ್ಲಿ ನಾವು ಅದನ್ನು ತರಬೇತಿಯ ಪ್ರಮುಖ ಭಾಗವಾಗಿ ಮಾಡುತ್ತೇವೆ ಎಂದಿದ್ದಾರೆ.

ಭಯೋತ್ಪಾದನೆ, ಭಯೋತ್ಪಾದಕರು ಮತ್ತು ಭಯೋತ್ಪಾದಕ ವ್ಯವಸ್ಥೆಯ ವಿರುದ್ಧದ ಹೋರಾಟವನ್ನು ಎಲ್ಲಾ ರಾಜ್ಯಗಳು ಮುನ್ನಡೆಸಬೇಕಾಗಿರುವುದರಿಂದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ ಮತ್ತು ಕಾರ್ಯತಂತ್ರವು ಶೀಘ್ರದಲ್ಲೇ ಅನಾವರಣವಾಗಲಿದೆ ಎಂದರು.

ಈ ಎರಡು ದಿನಗಳ ಭಯೋತ್ಪಾದನೆ ವಿರೋಧಿ ವಾರ್ಷಿಕ ಸಮ್ಮೇಳನದಲ್ಲಿ ವಿವಿಧ ಭದ್ರತಾ ಪಡೆಗಳು, ತಾಂತ್ರಿಕ, ಕಾನೂನು ಮತ್ತು ವಿಧಿವಿಜ್ಞಾನ ತಜ್ಞರು, ಭಯೋತ್ಪಾದನೆ ನಿಗ್ರಹದಲ್ಲಿ ತೊಡಗಿರುವ ಏಜೆನ್ಸಿಗಳೊಂದಿಗೆ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು ಮತ್ತು ಭಯೋತ್ಪಾದನೆಯಿಂದ ಎದುರಾಗುವ ಬೆದರಿಕೆಗಳ ಕುರಿತು ಚರ್ಚೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande