ಬೆಳಗಾವಿ : ಒನಕೆ ಓಬವ್ವ ಜಯಂತ್ಯೋತ್ಸವ
ಬೆಳಗಾವಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 11 ರಂದು ಬೆಳಗ್ಗೆ 11 ಗಂಟೆಗೆ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆ
ಬೆಳಗಾವಿ : ಒನಕೆ ಓಬವ್ವ ಜಯಂತ್ಯೋತ್ಸವ


ಬೆಳಗಾವಿ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 11 ರಂದು ಬೆಳಗ್ಗೆ 11 ಗಂಟೆಗೆ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಚರಿಸಲಾಗುವುದು.

ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಬೆಳಗಾವಿ ಉತ್ತರ ಶಾಸಕರಾದ ಆಸೀಫ್ ಸೇರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ವಿಶೇಷ ಆಮಂತ್ರಿತರಾಗಿ ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ರಾಜ್ಯ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷರಾದ ಭರವಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರುಗಳು ಆಗಮಿಸುವರು.

ರಾಜ್ಯ ಸಭೆಯ ಸಂಸದರಾದ ಈರಣ್ಣ ಕಡಾಡಿ, ಲೋಕ ಸಭೆಯ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ಜಗದೀಶ ಶೆಟ್ಟರ, ವಿಶ್ವೇಶ್ವರ ಹೆಗಡೆ ಕಾಗೇರಿ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande