ಬೆಳಗಾವಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
ಬೆಳಗಾವಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಉತ್ತರ ಹಾಗೂ ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಠರಣೆ-2024 ರ ನಿಮಿತ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಚುನಾವಣಾಧಿಕಾರಿಗಳು ಬೆಳಗಾವಿ ಇವರ ಆದೇಶದಂತೆ 9-11-2024, 10-11-2024, 23-11-2024
ಬೆಳಗಾವಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ


ಬೆಳಗಾವಿ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಉತ್ತರ ಹಾಗೂ ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಠರಣೆ-2024 ರ ನಿಮಿತ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಚುನಾವಣಾಧಿಕಾರಿಗಳು ಬೆಳಗಾವಿ ಇವರ ಆದೇಶದಂತೆ 9-11-2024, 10-11-2024, 23-11-2024 ಹಾಗೂ 24-11-2024 ರಂದು ವಿಶೇಷ ಅಭಿಯಾನಗಳನ್ನು ಆಯೋಜಿಸಲಾಗಿದೆ.

ಸದರಿ ದಿನಗಳಂದು ವಿಶೇಷ ಅಭಿಯಾನ ನಡೆಸಲು ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಸಂಭಂದಿಸಿದ ಮತಗಟ್ಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಾಜರಿರುವರು.

ಬೆಳಗಾವಿ ಉತ್ತರ ಹಾಗೂ ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಳಪಡುವ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ಹಾಗೂ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು ಅಂತವರ ಹೆಸರು, ಭಾವಚಿತ್ರ, ವಿಳಾಸ ತಿದ್ದುಪಡಿಗಾಗಿ ಅಥವಾ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವಿಕೆಗಾಗಿ ಸದರಿ ವಿಶೇಷ ಅಭಿಯಾನದ ದಿನಗಳಂದು ತಮ್ಮ ವ್ಯಾಪ್ತಿಯಲ್ಲಿ ನೇಮಿಸಲಾಗಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತಮ್ಮ ಅವಶ್ಯಕ ದಾಖಲೆಗಳ ಸಲ್ಲಿಸಬಹುದಾಗಿದೆ ಎಂದು ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande