ಹಾವೇರಿ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಶಿಗ್ಗಾಂವಿಯಲ್ಲಿ ಕಳೆದ ಚುನಾವಣೆಯಲ್ಲಿ ಸೋತರೂ ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು, ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.
ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಕುಂದೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹನುಮರಹಳ್ಳಿ, ಕಂಕನವಾಡ, ಚಿಕ್ಕ ನೆಲ್ಲೂರು ಹಾಗೂ ಕುಂದೂರು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ನಾವು ಎದುರಾಳಿ ಅಭ್ಯರ್ಥಿ ವಿರುದ್ಧ ಟೀಕೆ ಮಾಡುವುದಿಲ್ಲ. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದರು.
ಬಿಜೆಪಿ ಶ್ರೀಮಂತರ ಪಕ್ಷ ಆಗಿದೆ. ಶ್ರೀಮಂತರು ಬರೀ ಶ್ರೀಮಂತರಾಗಿ, ಬಡವರನ್ನು ಬಡವರನ್ನಾಗಿಯೇ ಮಾಡುವುದು ಬಿಜೆಪಿಯ ಸಿದ್ಧಾಂತ ಆಗಿದೆ. ದೇಶದ ಉತ್ತಮ ಭವಿಷ್ಯಕ್ಕೆ ಕಾಂಗ್ರೆಸ್ ಪಕ್ಷ ಬೇಕು. ಪ್ರಚಾರ ಪ್ರಿಯ ಬಿಜೆಪಿ ಪಕ್ಷ ಕ್ಷೇತ್ರಕ್ಕೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa