ಉದ್ಧವ್ ಠಾಕ್ರೆ ಶಿವಸೇನೆಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಮುಂಬೈ, 07 ನವೆಂಬರ್(ಹಿ.ಸ.) : ಆ್ಯಂಕರ್ : ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು ಮತ್ತು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ರದ
ನಮ್ಮ ಬಹುತೇಕ ಚುನಾವಣಾ ಭರವಸೆಗಳು ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಒಟ್ಟಾರೆ ಭರವಸೆಗಳ ಭಾಗ. ಆದರೆ, ಕೆಲವು ಅಂಶಗಳಿಗೆ ವಿಶೇಷ ಪ್ರಾಧಾನ್ಯತೆ ಬೇಕಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.


ಮುಂಬೈ, 07 ನವೆಂಬರ್(ಹಿ.ಸ.) :

ಆ್ಯಂಕರ್ : ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು ಮತ್ತು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ರದ್ದುಗೊಳಿಸುವುದು ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.

ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಠಾಕ್ರೆ, ನಮ್ಮ ಬಹುತೇಕ ಚುನಾವಣಾ ಭರವಸೆಗಳು ಮಹಾ ವಿಕಾಸ್ ಅಘಾಡಿ ಯ ಒಟ್ಟಾರೆ ಭರವಸೆಗಳ ಭಾಗವಾಗಿದೆ. ಆದರೆ, ಕೆಲವು ಅಂಶಗಳಿಗೆ ವಿಶೇಷ ಪ್ರಾಧಾನ್ಯತೆ ನೀಡಬೇಕಿದೆ ಎಂದು ಹೇಳಿದರು.

ಮಹಾ ವಿಕಾಸ್​ ಆಘಾಡಿಯು ಶಿವಸೇನೆ (ಯುಬಿಟಿ) ಕಾಂಗ್ರೆಸ್​ ಮತ್ತು ಶರದ್​ ಪವಾರ್​​ ಅವರ ಎನ್‌ಸಿಪಿ (ಎಸ್​ಪಿ) ಒಳಗೊಂಡ ಮೈತ್ರಿ ಒಕ್ಕೂಟ. ಈ ಒಕ್ಕೂಟ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಇದಕ್ಕೂ ಮುನ್ನವೇ ಪಂಚ ಗ್ಯಾರಂಟಿಯನ್ನು ಘೋಷಿಸಿದೆ.

ಸರ್ಕಾರದ ನೀತಿಯನುಸಾರ ರಾಜ್ಯದಲ್ಲಿ ಮಹಿಳಾ ವಿದ್ಯಾರ್ಥಿಗಳು ಉಚಿತ ಶಿಕ್ಷಣವನ್ನು ಹೇಗೆ ಪಡೆಯುತ್ತಿದ್ದಾರೋ ಹಾಗೆಯೇ ಎಂವಿಎ ಸರ್ಕಾರ ಅಧಿಕಾರಕ್ಕೆ ಬಂದರೆ, ಪುರುಷ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣಾ ನೀತಿ ಜಾರಿಗೆ ತರಲಾಗುವುದು ಎಂದು ಠಾಕ್ರೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande