ಬೆಳಗಾವಿ : ಯುವನಿಧಿ ಅರ್ಜಿ ಆಹ್ವಾನ
ಬೆಳಗಾವಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಬೆಳಗಾವಿ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. 2024-25ನೇ ಸಾಲಿನಲ್ಲಿ ಪಾಸಾದ ಪದವಿ/ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿ
ಬೆಳಗಾವಿ : ಯುವನಿಧಿ ಅರ್ಜಿ ಆಹ್ವಾನ


ಬೆಳಗಾವಿ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಬೆಳಗಾವಿ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

2024-25ನೇ ಸಾಲಿನಲ್ಲಿ ಪಾಸಾದ ಪದವಿ/ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು https://sevasindhugs.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂಘೋಷಣೆ ಕಡ್ಡಾಯವಾಗಿ ಮಾಡಬೇಕು. ಘೋಷಣೆ ಮಾಡದೇ ಇರುವಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0831-2443948 ಸಂಖ್ಯೆಗೆ ಸಂಪರ್ಕಿಸಬಹುದು. ಹಾಗೂ ಸುವರ್ಣ ವಿಧಾನ ಸೌಧದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂರ್ಪಕಿಸಬಹುದು ಎಂದು ಬೆಳಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande