ಹುಬ್ಬಳ್ಳಿ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯ ಕುಸುಗಲ್ ರಸ್ತೆಯ ರೈಲ್ವೆ ಬ್ರಿಜ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಎಸಿಪಿ ಶ್ರೀ ಶಿವರಾಜ್ ಕಟಕಬಾವಿ ರವರ ನೇತೃತ್ವದ ತಂಡ ದಾಳಿ ನಡೆಸಿ ಆರು ಜನರನ್ನು ಬಂಧಿಸಿದ್ದಾರೆ.
ಬಂಧಿತರಿಂದ 2.82 ಲಕ್ಷ ರೂ ಮೌಲ್ಯದ 2.8 ಕೆಜಿ ತೂಕದ ಗಾಂಜಾ, 2 ಬೈಕ್, 6 ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು 7 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa