ಹುಬ್ಬಳ್ಳಿ, 09 ನವೆಂಬರ್ (ಹಿ.ಸ.) :
ಆ್ಯಂಕರ್ : ಅಂತರ ಜಿಲ್ಲಾ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ.
ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಆರೋಪಿಯಾದ ಗೌನಿ ನರೇಂದ್ರ ರೆಡ್ಡಿ ಎಂಬಾತನನ್ನು ಬಂಧಿಸಲಾಗಿದೆ.
ಪ್ರಕರಣ ಕುರಿತು ವಿಚಾರಣೆ ವೇಳೆ ಆರೋಪಿ, ಜಿಲ್ಲೆಗಳಲ್ಲಿ ಕಳ್ಳತನ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಂಧಿತನಿಂದ ೩ ಲಕ್ಷ ರೂಪಾಯಿ ಮೌಲ್ಯದ ೫ ದ್ವಿಚಕ್ರ ವಾಹನ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa