ಬೆಳಗಾವಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನರಸಿಂಹವಾಡಿ ಶ್ರೀ ದತ್ತ ಜಯಂತಿ ಉತ್ಸವ ಹಾಗೂ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಡಿ.12 ರಿಂದ 16 ವರೆಗೆ ಪ್ರಯಾಣಿಕರಿಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರೆಗೆ ಹೋಗುವ ಪ್ರಯಾಣಿಕರಿಗೆ ಅನಯಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಗೋಕಾಕ ಘಟಕದಿಂದ ಡಿ. 12 ರಿಂದ 16 ರವರೆಗೆ ಜಾತ್ರಾ ಪ್ರಯುಕ್ತ ಗೊಡಚಿವರೆಗೆ ಡಿ.15 ರಂದು ನಿಪ್ಪಾಣಿ ಹಾಗೂ ಚಿಕ್ಕೋಡಿ ಘಟಕಗಳಿಂದ ನರಸಿಂಹವಾಡಿ ಹಾಗೂ ಶ್ರೀ ದತ್ತ ಜಯಂತಿ ಉತ್ಸವಕ್ಕೆ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು, ಇದರ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಚಿಕ್ಕೋಡಿ ವಿಭಾಗದ ವಾಕರಸಾಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa