ಮಡಿಕೇರಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ ಕೃಷ್ಣ ರವರು ನಿಧನ ಹೊಂದಿರುವ ಹಿನ್ನೆಲೆ ದಿವಂಗತರ ಗೌರವಾರ್ಥವಾಗಿ ಡಿಸೆಂಬರ್, 11 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿರುವುದರಿಂದ ಕುಶಾಲನಗರ ಹಾಗೂ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸೆಸ್ಕ್ ವತಿಯಿಂದ ನಿಗದಿಪಡಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಮುಂದೂಡಲಾಗಿದೆ ಎಂದು ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa