ಬೆಳಗಾವಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಡಿಸೆಂಬರ್. 3ನೇ ವಾರದಲ್ಲಿ ಬಿದಿರಿನ ಅಲಂಕಾರ ವಸ್ತುಗಳ ತಯಾರಿಕೆಗೆ ಉಚಿತ ತರಬೇತಿ ಪ್ರಾರಂಭವಾಗಲಿದೆ.
18 ರಿಂದ 45 ವಯಸ್ಸಿನ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ಕರೆ ಮೂಲಕ ಹಾಗೂ ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸಗಳನ್ನು ಬರೆದು ವಾಟ್ಸಾಪ್ ಮೂಲಕ ನೊಂದಾಯಿಸಬಹುದು. ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಅದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ- ಉದ್ಯೋಗ ಪ್ರಾರಂಬಿಸಲು ಬೇಕಾಗು ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳು ಉಚಿತವಾಗಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 8970145354, 9483485489 ಅಥವಾ 9482188780 ಸಂಖ್ಯೆ ಸಂಪರ್ಕಿಸಬುದು ಎಂದು ಬೆಳಗಾವಿ ವಿಭಾಗದ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa