ಬೆಳಗಾವಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆಯ ಪ್ರದಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ನೀರಾವರಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೆರೆ ಮಿಷನ್ ಆನ್ ಅಗ್ರಿಕಲ್ಲರ್ ಮೆಕನೈಸೇಶನ್ (ಎಸ್‌ಎಂಎಎಂ) ಯೋಜನೆಯಲ್ಲಿ ವಿವಿಧ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಾಗೂ ಮ.ಗಾಂ.ರಾ.ಉ.ಖಾತ್ರಿ ಯೋಜನೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಯನ್ನು ರಾಯಬಾಗ ತಾಲೂಕಿನ ಪ.ಜಾ ಮತ್ತು ಪ.ಪಂ ರೈತರು ಹಸಿರು ತಂತ್ರಾಂಶದಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳ ಕಚೇರಿ ಅಥವಾ ತಾಲೂಕಾ ತೋಟಗಾರಿಕೆ ಕಚೇರಿಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ರಾಯಬಾಗ ಹಿರಿಯ ಸಹಾಯಕ ತೋಟಗಾರಿಕೆ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa