ಕೊಪ್ಪಳ : ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಡಿ. 14ಕ್ಕೆ ಮುಂದೂಡಿಕೆ
ಕೊಪ್ಪಳ, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ನಿಧನದ ಕಾರಣ ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ನೆಹರು
ಕೊಪ್ಪಳ : ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಡಿ. 14ಕ್ಕೆ ಮುಂದೂಡಿಕೆ


ಕೊಪ್ಪಳ, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ನಿಧನದ ಕಾರಣ ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ನೆಹರು ಯುವ ಕೇಂದ್ರ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಡಿಸೆಂಬರ್ 11ರಂದು ಏರ್ಪಡಿಸಲಾಗಿದ್ದ ಒಂದು ದಿನದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಡಿಸೆಂಬರ್ 14ಕ್ಕೆ ಮುಂದೂಡಲಾಗಿದೆ.

ದಿವಂಗತರ ಗೌರವಾರ್ಥವಾಗಿ ಸರ್ಕಾರವು ಡಿ. 11ರ ಬುಧವಾರದಂದು ಸಾರ್ವತ್ರಿಕ ರಜೆ ಘೋಷಿಸಲಾಗಿರುವುದರಿಂದ ಮತ್ತು 3 ದಿನಗಳ ಕಾಲ ಶೋಕಾಚರಣೆ ನಿಮಿತ್ಯ ಜಿಲ್ಲಾ ಮಟ್ಟದ ವಿಜ್ಞಾನ ಮೇಳವನ್ನು ಡಿ. 14ರಂದು ನಡೆಸಲಾಗುವುದು ಎಂದು ಕೊಪ್ಪಳ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಾಂಟು ಪಾತರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande