ಶಾಸಕ ಭರತ್ ರೆಡ್ಡಿ ಸಂತಾಪ
ಬಳ್ಳಾರಿ, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಕಂಡ ಧೀಮಂತ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಸಾವಿಗೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ ಭರತ್ ರೆಡ್ಡಿ, ಎಸ್.ಎಂ.ಕೃಷ್ಣ ದೇಶ
ಶಾಸಕ ಭರತ್ ರೆಡ್ಡಿ ಸಂತಾಪ


ಬಳ್ಳಾರಿ, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಕಂಡ ಧೀಮಂತ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಸಾವಿಗೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ ಭರತ್ ರೆಡ್ಡಿ, ಎಸ್.ಎಂ.ಕೃಷ್ಣ ದೇಶ ಮತ್ತು ರಾಜ್ಯ ಕಂಡ ಧೀಮಂತ ನಾಯಕ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಯನ್ನು ತಂದರು, ಬೆಂಗಳೂರನ್ನು ಐಟಿ-ಬಿಟಿ ಹಬ್ ಮಾಡುವುದರಲ್ಲಿ ಅವರ ಪಾತ್ರವನ್ನು ಮರೆಯಲಾಗದು ಎಂದು ಎಸ್ ಎಂ ಕೃಷ್ಣ ಅವರ ಕಾರ್ಯವನ್ನು ಶ್ಲಾಘಿಸಿದರು.

ಯುಪಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಹಲವು ಚಾರಿತ್ರಿಕ ನಿರ್ಣಯ ಕೈಗೊಂಡಿದ್ದಾರೆ, ರಾಜ್ಯದ ದೇಶದ ನಿರ್ಮಾಣದಲ್ಲಿ ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರವಾದುದು. ನಾಡಿನ ರಾಜಕಾರಣದಲ್ಲಿ ತುಂಬಲಾರದ ನಷ್ಟ, ರಾಜಕೀಯ ಬದುಕಿನ ಮೌಲ್ಯಗಳು ನಮ್ಮಂತಹ ಕಿರಿಯರಿಗೆ ದಾರಿದೀಪ ಎಂದು ಶಾಸಕ ನಾರಾ ಭರತ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande