ಹೊಸಪೇಟೆ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಇಂಡಿಯನ್ ಆಯಿಲ್ ಕಾಪೆರ್Çೀರೇಷನ್ ಲಿಮಿಟೆಡ್ ಬಳ್ಳಾರಿ ಇವರು ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಹೊಸಹಳ್ಳಿ ಹೋಬಳಿಯ ನಿಂಬಳಗೆರೆ ಗ್ರಾಮದ ಸರ್ವೆ ನಂ.382/ಬಿ/1 ರಲ್ಲಿ ಪೆಟ್ರೋಲಿಯಂ ರಿಟೈಲ್ ಔಟ್ಲೇಟ್ ಸ್ಥಾಪನೆ ಮಾಡಲು ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿರುತ್ತಾರೆ.
ಗಜೇಂದ್ರ ಕುಮಾರ.ಪಿ. ತಂದೆ ಪಿ.ಮಹಾಂತೇಶ್, ಗಾಣಗಟ್ಟಿ ಗ್ರಾಮ, ಕೊಟ್ಟೂರು ತಾಲೂಕು ಇವರನ್ನು ಫ್ರಾಂಚೈಸ್ಸಿಯನ್ನಾಗಿ ಕಂಪನಿ ನೇಮಕ ಮಾಡಿದ್ದು, ಈ ಜಮೀನಿನಲ್ಲಿ ಪೆಟ್ರೋಲಿಯಂ ರಿಟೈಲ್ ಔಟ್ಲೆಟ್ ಸ್ಥಾಪನೆ ಮಾಡಲು ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಲು ಸಾರ್ವಜನಿಕರಿಂದ ಆಕ್ಷೇಪಣೆಗಳು ಇದ್ದಲ್ಲಿ ಹತ್ತು ದಿನದೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಇಮೇಲ್ ಐಡಿ: vijayanagaradc@gmail.com ಅಥವಾ ಹೊಸಪೇಟೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎಂಎಜಿ-2 ಶಾಖೆಗೆ ಸಲ್ಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್