ಲಕ್ನೋ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜನವರಿ 13 ರಿಂದ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಮೇಳಕ್ಕೆ ಸಿದ್ಧತೆಗಳು ನಡೆದಿದ್ದು, ಇಂದು ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ನೇತೃತ್ವದಲ್ಲಿ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.
ಪ್ರಯಾಗರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಪ್ರದೇಶದ ಸುತ್ತಮುತ್ತ ಮಾದಕ ದ್ರವ್ಯ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಯಾವುದೇ ಅನೈತಿಕ ಚಟುವಟಿಕೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆ ನಂತರ ಮಾತನಾಡಿದ ಅವರು ಮಹಾಕುಂಭ ಮೇಳ ಪ್ರದೇಶದಲ್ಲಿ ಆರು ಸಾವಿರ ಹಾಸಿಗೆ ಆಸ್ಪತ್ರೆ, ಅಗತ್ಯ ಔಷಧಿಗಳ ವಿತರಣಾ ಕೇಂದ್ರ, ನುರಿತ ವೈದ್ಯಕೀಯ ತಂಡಗಳು, ತುರ್ತು ಸೇವೆಗಳಂತಹ ವೈದ್ಯಕೀಯ ವ್ಯವಸ್ಥೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa