ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ : ಬೊಮ್ಮಾಯಿ
ನವದೆಹಲಿ, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನಾಕಾರರ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿ ಪ್ರಹಾರ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ
Bomayi


ನವದೆಹಲಿ, 10 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನಾಕಾರರ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿ ಪ್ರಹಾರ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಜನ ವಿರೋಧಿ ಸರ್ಕಾರ ಎಂದು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಪಂಚಮಸಾಲಿ ಪೀಠದ ಸ್ವಾಮೀಜಿವರು ತಮ್ಮನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಈಗ ಪ್ರತಿಭಟನೆ ಮಾಡುವವರ ಮೇಲೆ ಲಾಠಿ ಪ್ರಹಾರ ಮಾಡಿ ರಕ್ತ ಬರುವಂತೆ ಮಾಡಿದ್ದು, ಕ್ಷಮಿಸಲಾರದಂತಹ ಅಪರಾಧ, ಇದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ. ಪೋಲಿಸ್ ಆಡಳಿತ, ದೌರ್ಜನ್ಯ ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande