ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಆರ್ ಅಶ್ವಿನ್ ನಿವೃತ್ತಿ
ನವದೆಹಲಿ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಕ್ರಿಕೆಟ್‌ನ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ೩ನೇ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಳ್ಳುತ್ತಿದ್ದಂತೆಯೇ ೩೮ ವರ್ಷದ ಕ್ರಿಕೆಟಿಗ ಅಶ್ವಿನ್ ತಮ್ಮ ನಿವೃತ
ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಆರ್ ಅಶ್ವಿನ್ ನಿವೃತ್ತಿ


ನವದೆಹಲಿ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಕ್ರಿಕೆಟ್‌ನ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ೩ನೇ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಳ್ಳುತ್ತಿದ್ದಂತೆಯೇ ೩೮ ವರ್ಷದ ಕ್ರಿಕೆಟಿಗ ಅಶ್ವಿನ್ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೂರು ಟೆಸ್ಟ್‌ಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಅಶ್ಚಿನ್ ಆಟವಾಡಿದ್ದರು.

೨೦೧೧ರ ನವೆಂಬರ್‌ನಲ್ಲಿ ನವದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಶ್ಚಿನ್ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿದ್ದರು. ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಅಶ್ವಿನ್ ೧೦೬ ಟೆಸ್ಟ್‌ಗಳಲ್ಲಿ ೫೩೭ ವಿಕೆಟ್‌ಗಳನ್ನು ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande