ಬೆಳಗಾವಿ, 20 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ನಂತರ ಇಂದು ಬೆಳಗಾವಿ 5ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಸಿ.ಟಿ.ರವಿ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಜಾಮೀನು ನೀಡುವಂತೆ ವಾದ ಮಂಡಿಸಿದರು. ನಂತರ ನ್ಯಾಯಾಧೀಶರು ಕಲಾಪವನ್ನು ಮಧ್ಯಾಹ್ನ ೩ ಗಂಟೆಗೆ ಮುಂದೂಡಿದರು.
ಬಳಿಕ ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಅದರಂತೆ ಸಾರಿಗೆ ವಾರೆಂಟ್ ಮೇಲೆ ಪೊಲೀಸರು ಸಿ.ಟಿ ರವಿ ಅವರನ್ನು ಕರೆ ತರಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಘನತೆ, ಗೌರವದಿಂದ ಆರೋಪಿಯನ್ನು ಕರೆದುಕೊಂಡು ಹೋಗಬೇಕು. 24 ಗಂಟೆಯೊಳಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸೂಚನೆ ನೀಡಿದೆ. ಪೊಲೀಸರು ಬೆಳಗಾವಿಯಿಂದ ಬೆಂಗಳೂರಿನತ್ತ ಸಿ.ಟಿ. ರವಿ ಅವರನ್ನು ಕರೆದುಕೊಂಡು ಬರುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್