ಮಾಸ್ಕೋ, 20 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಉಕ್ರೇನ್‌ನೊಂದಿಗೆ ಯಾವುದೇ ರೀತಿಯ ರಾಜಿಗೆ ಸಿದ್ಧ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಅಮೆರಿಕಾ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಅವರ ನೇತೃತ್ವದಲ್ಲಿ ಸಂಭವನೀಯ ಮಾತುಕತೆ ನಡೆಸುವ ಪರಿಸ್ಥಿತಿ ಎದುರಾದಲ್ಲಿ ತಾವು ಉಕ್ರೇನ್‌ನೊಂದಿಗೆ ರಾಜಿ ಮಾಡಿಕೊಳ್ಳಲು ಸಿದ್ಧರಿರುವುದಾಗಿ ಹೇಳಿದರು. ಉಕ್ರೇನ್ ಅಧ್ಯಕ್ಷ ಒಲೋದಿಮಿರ್ ಝೆಲೆನ್‌ಸ್ಕಿ ಒಳಗೊಂಡಂತೆ ಯಾರ ಜೊತೆ ಬೇಕಾದರೂ ಸಂಧಾನ ಮಾತುಕತೆ ನಡೆಸುವುದಾಗಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್