ಮಂಡ್ಯ, 21 ಡಿಸೆಂಬರ್ (ಹಿ.ಸ.):
ಆ್ಯಂಕರ್ : ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನ ವಿಚಾರ ಗೋಷ್ಠಿಗಳು ಗಮನ ಸೆಳೆದವು. ಮಂಡ್ಯ ನಗರದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಇರುವ ಪ್ರಧಾನ ವೇದಿಕೆಯಲ್ಲಿ ಸಾಹಿತ್ಯದಲ್ಲಿ ರಾಜಕೀಯ ವಿಚಾರಗೋಷ್ಠಿ ನಡೆಯಿತು.
ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮಾಜಿ ಸಭಾಪತಿ ಬಿ.ಎಲ್.ಶಂಕರ್, ಮಾಜಿ ಸಚಿವೆ ಉಮಾಶ್ರೀ, ಮಾಜಿ ಶಾಸಕ ಡಾ.ಅನ್ನದಾನಿ ಹಾಗೂ ಪತ್ರಕರ್ತ ರವೀಂದ್ರ ರೇಷ್ಮೆ ವಿಚಾರಗೋಷ್ಠಿಗಳಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಸಾಹಿತಿಗಳು ಪತ್ರಕರ್ತರನ್ನು ಅಸ್ಪೃಶ್ಯರಂತೆ ನೋಡುವುದನ್ನು ಬಿಡಬೇಕು ಎಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್