ಮಡಿಕೇರಿ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಡಿಕೇರಿಯ ಮುಖ್ಯ ರಸ್ತೆಯಲ್ಲಿ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು.
ಬಳಿಕ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ಚಾಲನೆ ನೀಡಿದ ಅವರು, ರೈತ ಮಹಿಳೆಯರಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎನ್‌ಆರ್‌ಎಲ್‌ಎಂ ಯೋಜನೆಯಡಿ ಸಹಾಯಧನ ನೀಡಿ, ಮಾರಾಟಕ್ಕೆ ಸಂಪರ್ಕ ಕಲ್ಪಿಸಲು ಸಹಕಾರ ನೀಡುವುದಾಗಿ ತಿಳಿಸಿದರು.
ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯ ೫ ತಾಲೂಕುಗಳಿಂದ ಒಟ್ಟು ೫೮ ಸ್ಪರ್ಧಿಗಳು ಭಾಗವಹಿಸಿ, ೯೦ಕ್ಕೂ ಹೆಚ್ಚು ತಿನಿಸುಗಳನ್ನು ಪ್ರದರ್ಶಿಸಿದರು. ಎಲಗದ ಮರದ ಚಕ್ಕೆಯ ಗಿಣ್ಣು, ಹುರುಳಿ ಕಡುಬು, ಕೆಂಜಿಗ ಕುಡಿ ಎಲೆ ಚಟ್ನಿ ಪ್ರಮುಖವಾಗಿ ಪ್ರದರ್ಶನದಲ್ಲಿ ಗಮನಸೆಳೆದವು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್