ಹಾವೇರಿ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲಾಗುವ ೨೬೬ ಕಾಮಗಾರಿಗಳ ಪಟ್ಟಿಯಲ್ಲಿ, ಎರೆಹುಳು ಗೊಬ್ಬರ ತಯಾರಿಕೆಯ ತೊಟ್ಟಿ ನಿರ್ಮಾಣವನ್ನೂ ಸೇರಿಸಲಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ೮ ಸಾವಿರ ತೊಟ್ಟಿ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಹಾವೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ‘ಎರೆಹುಳು ತೊಟ್ಟಿ’ ನಿರ್ಮಾಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ತಾಲೂಕಿಗೆ ಮೊದಲನೇ ಹಂತದಲ್ಲಿ ೩ ತಿಂಗಳೊಳಗಾಗಿ ಕನಿಷ್ಠ ಒಂದು ಸಾವಿರ ಎರೆಹಳು ತೊಟ್ಟಿ ನಿರ್ಮಾಣದ ಗುರಿ ಹೊಂದಲಾಗಿದೆ. ಮುಂದಿನ ಹಂತದಲ್ಲಿ ಉಳಿದ ರೈತರಿಗೆ ಅನುಕೂಲವಾಗುವಂತೆ ನಿರ್ಮಾಣ ಮಾಡಲಾಗುವುದು. ಮನ್ರೇಗಾ ಯೋಜನೆಯಡಿ ೨೦ ಸಾವಿರ ರೂಪಾಯಿ ವೆಚ್ಚದಲ್ಲಿ ಗ್ರಾಮೀಣ ಭಾಗದ ರೈತರಿಗೆ ವೈಯಕ್ತಿಕ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಎರೆಹುಳು ತೊಟ್ಟಿ ನಿರ್ಮಾಣದೊಂದಿಗೆ ಜಿಲ್ಲೆಯಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿ, ಉತ್ತಮ ಗುಣಮಟ್ಟದ ಆಹಾರಧಾನ್ಯ ಹಾಗೂ ತೋಟಗಾರಿಕೆ ಬೆಳೆಗಳನ್ನು ಉತ್ಪಾದಿಸುವಲ್ಲಿ ಅನುಕೂಲವಾಗುವ ಸದುದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ. ಎರೆಹುಳು ತೊಟ್ಟಿ ನಿರ್ಮಾಣಕ್ಕಾಗಿ ನಿಮ್ಮ ಗ್ರಾಮ ಪಂಚಾಯತಿ ಸಂರ್ಪಕಿಸುವಂತೆ ಅವರು ಮನವಿ ಮಾಡಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್