ನವದೆಹಲಿ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ೮ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ ಮುಂದಿನ ತಿಂಗಳು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶಿಷ್ಟ ಸಂವಾದಾತ್ಮಕ ಕಾರ್ಯಕ್ರಮದ ನೋಂದಣಿ ಈಗಾಗಲೇ ಪ್ರಾರಂಭವಾಗಿದೆ.
https://innovateindia1.mygov.in/ ಪೋರ್ಟಲ್‌ನಲ್ಲಿ ಜನವರಿ ೧೪ ರವರೆಗೆ ನೋಂದಣಿಗೆ ಅವಕಾಶವಿದೆ.
ಈ ಕಾರ್ಯಕ್ರಮವು ಪರೀಕ್ಷೆ ಒತ್ತಡವನ್ನು ಕಡಿಮೆ ಮಾಡಲು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಪರೀಕ್ಷೆಯನ್ನು ಉತ್ಸವವಾಗಿ ಆಚರಿಸಲು ಪ್ರೋತ್ಸಾಹಿಸುವ ಪರಿಕಲ್ಪನೆಯಾಗಿದೆ.
೬ ರಿಂದ ೧೨ ನೇ ತರಗತಿಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಒಅಕಿ ಮಾದರಿಯಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್