ದೇವಾಸ್, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಧ್ಯ ಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಭಾರಿ ಅಗ್ನಿ ಅವಘ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಶನಿವಾರ ನಡೆದಿದೆ.
ಘಟನೆಯ ಬಗ್ಗೆ ಮಾಹಿತಿ ದೊರೆತ ತಕ್ಷಣ ದೇವಾಸ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಇಲ್ಲಿ ವಾಸಿಸುತ್ತಿದ್ದ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಈ ದುರಂತದಲ್ಲಿ ನಿವಾಸಿಗಳಾದ ದಿನೇಶ್ ಕಾರ್ಪೆಂಟರ್ (35), ಗಾಯತ್ರಿ ಕಾರ್ಪೆಂಟರ್ (30), ಇಶಿಕಾ (10) ಮತ್ತು ಚಿರಾಗ್ (7) ಸಾವನ್ನಪ್ಪಿದ್ದಾರೆ.
ಡೈರಿ ನಿರ್ವಾಹಕರಾಗಿ ದಿನೇಶ್ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದು, ಇದೇ ಕಟ್ಟಡದಲ್ಲಿ ಕೆಳಗೆ ಅಂಗಡಿ ನಡೆಸುತ್ತಿದ್ದು, ಮೇಲಿನ ಮಹಡಿಯಲ್ಲಿ ಕುಟುಂಬ ಸಮೇತ ವಾಸವಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್