ನವದೆಹಲಿ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ತ್ರಿಪುರಾದ ಅಗರ್ತಲಾದಲ್ಲಿ ಈಶಾನ್ಯ ಮಂಡಳಿ ಎನ್‌ಇಸಿಯ ೭೨ ನೇ ಸಮಗ್ರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಸಭೆಯಲ್ಲಿ ಕೇಂದ್ರ ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಈಶಾನ್ಯ ಪ್ರದೇಶ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಡಾ. ಸುಕಾಂತ ಮಜುಂದಾರ್ ಭಾಗವಹಿಸಲಿದ್ದಾರೆ. ಈಶಾನ್ಯ ರಾಜ್ಯಗಳ ಎಲ್ಲ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಸಭೆಯಲ್ಲಿ ಉಪಸ್ಥಿತರಿರುತ್ತಾರೆ
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್