ಬೆಂಗಳೂರು, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೊಲೆರೋ ವಾಹನ ಹುಬ್ಬಳಿಯಿಂದ ತಮಿಳುನಾಡಿನ ಕೃಷ್ಣಗಿರಿಗೆ ಗೆಣಸು ತುಂಬಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಉರಳಿದ ಘಟನೆ ಮುಂಜಾನೆ ಬೆಂಗಳೂರಿನ ಯಶವಂತಪುರ ಮೇಲ್ಸೇತುವೆ ಬಳಿ ನಡೆದಿದೆ.
ಈ
ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲಿ ಭಾರಿ ವಾಹನಗಳ ಸಂಚಾರ ಸ್ಥಗಿತಗೊಂಡು ಅಡಚಣೆ ಉಂಟಾಗಿದೆ. ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಕಳೆದ ನಾಲ್ಕೈದು ತಿಂಗಳ ಅಂತರದಲ್ಲಿ ಮೇಲ್ಸೇತುವೆ ಮೇಲೆ ನಡೆದ ಮೂರನೇ ಅಪಘಾತ ಇದಾಗಿದೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್