೨೯ ರಂದು  ’ಮನ್ ಕಿ ಬಾತ್’ ಕಾರ್ಯಕ್ರಮ
ನವದೆಹಲಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು, ಇದೇ ೨೯ ರಂದು ಆಕಾಶವಾಣಿಯಲ್ಲಿ ಪ್ರತಿ ತಿಂಗಳು ಪ್ರಸಾರವಾಗುವ ತಮ್ಮ ಜನಪ್ರಿಯ ’ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ ೧೧ ಗಂಟೆಗೆ ಈ ಕಾರ್ಯಕ
’ಮನ್ ಕಿ ಬಾತ್’ ಕಾರ್ಯಕ್ರಮ


ನವದೆಹಲಿ, 22 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು, ಇದೇ ೨೯ ರಂದು ಆಕಾಶವಾಣಿಯಲ್ಲಿ ಪ್ರತಿ ತಿಂಗಳು ಪ್ರಸಾರವಾಗುವ ತಮ್ಮ ಜನಪ್ರಿಯ ’ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ ೧೧ ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ಇದು ಮನ್ ಕಿ ಬಾತ್‌ನ ೧೧೭ನೇ ಅವತರಣಿಕೆಯಾಗಿದೆ.

ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ, ಆಕಾಶವಾಣಿ ಸುದ್ದಿ ಜಾಲತಾಣ, ಮೊಬೈಲ್ ಆಪ್ ಹಾಗೂ ಯೂಟ್ಯೂಬ್ ಚಾನಲ್‌ಗಳಲ್ಲೂ ಈ ಕಾರ್ಯಕ್ರಮ ಮೂಡಿಬರಲಿದೆ.

ಪ್ರಧಾನಮಂತ್ರಿ ಕಾರ್ಯಾಲಯ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಜಾಲತಾಣಗಳಲ್ಲೂ ಈ ಕಾರ್ಯಕ್ರಮ ಬಿತ್ತರಗೊಳ್ಳಲಿದೆ. ಹಿಂದಿ ಭಾಷೆಯ ಪ್ರಸಾರದ ನಂತರ ಪ್ರಾದೇಶಿಕ ಭಾಷೆಗಳಲ್ಲೂ ಈ ಕಾರ್ಯಕ್ರಮ ಮೂಡಿಬರಲಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande